ಬೆಂಗಳೂರು :
ಐಟಿ ದಾಳಿ ನಡೆಸಿದ ವಿಚಾರವಾಗಿ ಇಂದು ಮಾಜಿ ಡಿಸಿಎಂ ಪರಮೇಶ್ವರ್ ಅವರು ಬೆಂಗಳೂರಿನ ಕ್ರಿನ್ಸ್ ರೋಡ್ ನಲ್ಲಿರುವ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಪರಮೇಶ್ವರ್ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ದಾಳಿಗೆ ಸಂಬಂಧಿಸಿದ ದಾಖಲೆಗಳು, ಪರಮೇಶ್ವರ್ ಅವರ ವ್ಯವಹಾರಗಳು ಸೇರಿದಂತೆ ಹಲವು ಮಾಹಿತಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ಅಧಿಕಾರಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಪರಮೇಶ್ವರ್ ಅವರಿಗೆ ತಿಳಿಸಿದ್ದರು. ಅದರಂತೆ ಅವರು ನಗರದ ಕ್ವೀನ್ಸ್ ರಸ್ತೆಯಲ್ಲಿನ ಐಟಿ ಕಚೇರಿಗೆ ಹಾಜರಾಗಿದ್ದಾರೆ. ಪರಮೇಶ್ವರ್ ಅವರ ಸಹೋದರನ ಪುತ್ರ ಆನಂದ್ ಕೂಡ ಐಟಿ ವಿಚಾರಣೆಗೆ ಆಗಮಿಸಿದ್ದಾರೆ.
ಐಟಿ ದಾಳಿ ವೇಳೆ ಪರಮೇಶ್ವರ್ ಅವರ ಮನೆಯಲ್ಲಿ 89 ಲಕ್ಷ ರೂ. ನಗದು ಸಿಕ್ಕಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ಸಮನ್ಸ್ ನೀಡಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ