ಕಲಬುರ್ಗಿ :
ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡುವ ಮೂಲಕ ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮತ್ತಷ್ಟು ವಿಕೆಟ್ ಗಳು ಕೂಡ ಶೀಘ್ರದಲ್ಲೇ ಪತನವಾಗಲಿವೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ತಿಳಿಸಿದ್ದಾರೆ.
ನಗರದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ತೊರೆದು ಉಮೇಶ್ ಜಾಧವ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದು ಫಸ್ಟ್ ವಿಕೆಟ್. ಇನ್ನೂ ವಿಕೆಟ್ ಗಳು ಬೀಳುತ್ತವೆ. ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಲ್ಲಿ ಭಿಕ್ಷುಕನ ರೀತಿಯಲ್ಲಿ ನಿಂತಿದ್ದಾರೆ. ಕುಮಾರಸ್ವಾಮಿಯವರನ್ನು ನೋಡಿದಾಗ ಯಾರಿಗಾದರೂ ಅವರು ಮುಖ್ಯಮಂತ್ರಿ ಎಂದು ಅನಿಸುತ್ತಿದೆಯಾ ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪಿಚ್ ಸಿದ್ಧವಾಗಿದೆ. ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ ಮೂಲಕ ಪಕ್ಷ ಬಲಿಷ್ಠವಾಗಲಿದೆ. ಹೈದರಾಬಾದ್-ಕರ್ನಾಟಕದಲ್ಲಿ ಬಿಜೆಪಿ ಇನ್ನಷ್ಟು ಪ್ರಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
