ಹಾಸನ :
ಬೆಂಗಳೂರು,ನ27:ಜೆಡಿಎಸ್ ನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎಚ್.ಎಸ್. ಪ್ರಕಾಶ್ ಇಂದು ನಿಧನರಾದರು.
ದೀಘ್ರಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅವರು ಅಗಲಿದ್ದಾರೆ.
1994, 2004, 2008 ಮತ್ತು 2013 ರಲ್ಲಿ ಗೆಲುವು ಸಾಧಿಸಿದ್ದರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಅವರು ಪರಾಭವಗೊಂಡಿದ್ದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿಕಟವರ್ತಿಯಾಗಿದ್ದ ಎಚ್.ಎಸ್. ಪ್ರಕಾಶ್, 1985 ರಿಂದ 87ರ ಅವಧಿಯಲ್ಲಿ ಹಾಸನ ನಗರ ಪಾಲಿಕೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಪ್ರಕಾಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇವೇಗೌಡರು ಖಾಸಗಿ ಆಸ್ಪತ್ರೆಗೆ ತೆರಳಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ನಾಳೆ ಹಾಸನದಲ್ಲಿ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಡೆಯಲಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
