ಮಂಗಳೂರು :
ಜೆಡಿಎಸ್‌ನ ಹಿರಿಯ ನಾಯಕ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ (80) ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಅಮರನಾಥ ಶೆಟ್ಟಿ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ, ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ