ಬೆಂಗಳೂರು:
ಅನಾರೋಗ್ಯ ಹಿನ್ನೆಲೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆನ್ನು ನೋವು, ಅಧಿಕ ರಕ್ತದೊತ್ತಡ, ಎದೆ ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಡಿ.ಕೆ.ಶಿವಕುಮಾರ್ ಅವರು ಬಿಪಿ, ಶುಗರ್ನಲ್ಲಿ ವ್ಯತ್ಯಾಸವಾದ ಹಿನ್ನೆಲೆ ವೈದ್ಯರ ಸೂಚನೆ ಮೇರೆಗೆ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯ ವೈದ್ಯ ಶಂಕರ್ ಅವರು 2 ಗಂಟೆಗೂ ಅಧಿಕ ಕಾಲ ಡಿಕೆಶಿ ಅವರ ಆರೋಗ್ಯ ತಪಾಸಣೆ ನಡೆಸಿದ್ದು, ಇಂದು ಅಪೊಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಗೆ ಆಗಾಗ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಅದೇ ಕಾರಣದಿಂದ ಡಿಕೆಶಿ ಜಾಮೀನು ಪಡೆದಿದ್ದರು. ಡಿಕೆಶಿ ಆರೋಗ್ಯವನ್ನು ವಿಚಾರಿಸಲು ಕಾಂಗ್ರೆಸ್ ಮುಖಂಡರು ಅಪೋಲೋ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ