ಬೆಂಗಳೂರು:
ಆಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ವಿಚಾರಣೆಗಾಗಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ತಮ್ಮ ವಕೀಲ ಚಂದ್ರಶೇಖರ್ ಅವರೊಂದಿಗೆ ಬೆಂಗಳೂರಿನ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಫೋಲಿಸರು ರೆಡ್ಡಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ನಡೆಯಲಿರುವ ಎಲ್ಲಾ ವಿಚಾರಣೆಗಳನ್ನು ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದು, ನ್ಯಾಯಾಲಯದ ಮುಂದೆ ಈ ಪ್ರಕರಣ ಹೋದ ವೇಳೆಯಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಉಲ್ಟಾ ಹೇಳಿಕೆಗಳನ್ನು ನೀಡದೇ ಇರುವುದಕ್ಕೆ ತಡೆಯುವುದಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಪೊಲೀಸರು ನನಗೆ ನೋಟಿಸ್ ಕೊಟ್ಟಿರಲಿಲ್ಲ, ಶನಿವಾರ ನಮ್ಮ ವಕೀಲರ ಮೂಲಕ ನೋಟಿಸ್ ಕೊಟ್ಟು ಭಾನುವಾರ ಹಾಜರಾಗಲು ಸೂಚಿಸಿದ್ದರು. ಆದರೆ ಶನಿವಾರವೇ ಬಂದಿದ್ದೇವೆ, ನನಗೆ ಬಂಧನದ ಭಯ ಇಲ್ಲ, ಬೇಕಾದರೆ ಬಂಧಿಸಲಿ, ನೋಟಿಸ್ ಕೊಡದೆ ತಾನಾಗಿಯೇ ಯಾಕೆ ಪೊಲೀಸರ ಬಳಿ ಬರಲಿ, ನಾನು ತಲೆಮರೆಸಿಕೊಂಡು ಇರಲಿಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ರೆಡ್ಡಿ ಜತೆಗೆ ಅವರ ಆಪ್ತನೆನಿಸಿಕೊಂಡಿರುವ ಅಲಿಖಾನ್ ಕೂಡ ಹಾಜರಾಗಿದ್ದಾರೆ.
ಸಿಸಿಬಿ ಮುಖ್ಯಸ್ಥ ಅಲೋಕ್ ಕುಮಾರ್ ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ, ರೆಡ್ಡಿ ಇನ್ನೇನು ಪ್ರಶ್ನೆಗಳನ್ನು ಕೇಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
