ಬೆಂಗಳೂರು :
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿಜಯಪುರ ಜಿಲ್ಲೆ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ತಡರಾತ್ರಿ 1 ಗಂಟೆಗೆ ನಿಧನರಾಗಿದ್ದಾರೆ.
ಬೆಂಗಳೂರಿನ ಅಪೋಲೊ ಆಸ್ಪತ್ರೆಯಿಂದ ರಸ್ತೆ ಮೂಲಕ ಮನಗೂಳಿ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದ್ದು, ಮಧ್ಯಾಹ್ನ 3 ಗಂಟೆಗೆ ಸಿಂದಗಿ ತಲುಪುವ ಸಾಧ್ಯತೆ ಇದೆ.
ಶಾಸಕರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಕುಟುಂಬದವರ, ಸಂಬಂಧಿಕರ ದರ್ಶನಕ್ಕೆ ಇಡಲಾಗುವುದು. ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವರ ಶಿಕ್ಷಣ ಸಂಸ್ಥೆಯಾದ ಹೆಚ್.ಜಿ. ಕಾಲೇಜಿನಲ್ಲಿ ಇಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಶಿಕ್ಷಣ ಸಂಸ್ಥೆಯ ಆವರಣದಲ್ಲೇ ಅಂತಿಮ ಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ಪರಸ್ಪರ ಅಂತರವನ್ನು ಕಾಪಾಡಿಕೊಂಡು ಹಾಗೂ ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಅಂತಿಮ ಸಂಸ್ಕಾರ ನೆರವೇರಿಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
