ಬೆಂಗಳೂರು :

ಅನರ್ಹರಿಗೆ ಚುನಾವಣೆಗೆ ನಿಲ್ಲಲು ಅವಕಾಶ ಕೊಡಬಾರದಿತ್ತು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ನ 17 ಅನರ್ಹ ಶಾಸಕರ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದ್ದು, ಈ ತೀರ್ಪಿನ ಕುರಿತು ಮಾತನಾಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸುಪ್ರೀಂಕೋರ್ಟ್ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಸುಪ್ರೀಂಕೋರ್ಟ್ ಅನರ್ಹ ಶಾಸಕರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಅವರಿಗೆ ಪುನಃ ಜನರ ಮುಂದೆ ನಿಲ್ಲಿಸಿಕೊಳ್ಳಲು ಅವಕಾಶ ಕೊಡಬಾರದಿತ್ತು. ಈಚೆಗೆ ನಡೆದ ಬಹುತೇಕ ಚುನಾವಣೆಗಳಲ್ಲಿ ಪಕ್ಷಾಂತರಿಗಳನ್ನು ಜನರು ತಿರಸ್ಕರಿಸಿದ್ದಾರೆ. ಇವರ ವಿಚಾರ ಏನಾಗುತ್ತೋ ನೋಡೋಣ ಎಂದರು.
ಇನ್ನು ಪಕ್ಷಾಂತರ ನಿಷೇಧ ಕಾಯ್ದೆಗೆ ಆಧಾರವಾಗಿರುವ ಸಂವಿಧಾನದ 10ನೇ ಪರಿಚ್ಛೇದದಲ್ಲಿ ‘ಸದನದ ಉಳಿದ ಅವಧಿಗೆ’ ಎನ್ನುವ ಪದಗಳ ಉಲ್ಲೇಖವಿದೆ. ಈ ದೃಷ್ಟಿಯಿಂದ ನೋಡಿದರೆ ಕರ್ನಾಟಕ ವಿಧಾನಸಭೆಯ ಅವಧಿ 2023ರವರೆಗೆ ಇದೆ. ಈ ಹಿನ್ನೆಲೆಯಲ್ಲಿ ನಾನು ಅನರ್ಹತೆಯ ತೀರ್ಮಾನ ತೆಗೆದುಕೊಂಡಿದ್ದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








