ಬೆಂಗಳೂರು:
ಒಂದು ಕಾಲದಲ್ಲಿ ಬೆಂಗಳೂರನ್ನೇ ಆಳಿದ್ದ ಮುತ್ತಪ್ಪ ರೈ (68) ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಬೆಂಗಳೂರನ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅವರನ್ನು ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ನಸುಕಿನ ೨ ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ರಾಮನಗರ ತಾಲೂಕು ಬಿಡದಿಯಲ್ಲಿರುವ ಸ್ವ ಗೃಹದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯ ಕ್ರಿಯೆ ನಡೆಯಲಿದ್ದು, ಕೇವಲ ಕುಟಂಬ ಸದಸ್ಯರು ಮಾತ್ರ ಪಾಲ್ಗೊಳ್ಳಲಿದ್ದಾರೆ. ಅವರ ಅಭಿಮಾನಿಗಳು ಸಹಕರಿಸಬೇಕು ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ