ಮಂಗಳೂರು:
ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ನಡುವೆ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬಂಟ್ವಾಳ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೋಟ್ಲು ಟೋಲ್ ಗೇಟ್ ಬಳಿ ನಡೆದಿದೆ.
ಧರ್ಮಸ್ಥಳದಿಂದ ಹೆದ್ದಾರಿ ಮೂಲಕ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿಯಾಗಿದೆ.
ಅಪಘಾತದಿಂದ ಕಾರು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ವರದಿಯಾಗಿದೆ. ಕಾರಿನಲ್ಲಿದ್ದವರು ಭಟ್ಕಳ ನಿವಾಸಿಗಳು ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ 11 ಜನ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಈ ಅಪಘಾತದಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
