ಉಪಚುನಾವಣೆ ಹಿನ್ನೆಲೆ : ನಾಲ್ಕು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:

      ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ಹಲವಾರು ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಅನ್ವಯ ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. 

      ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರನ್ನು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ.ರಾಜೇಂದ್ರ ಪ್ರಸಾದ್ ಅವರನ್ನು ಮಳವಳ್ಳಿಯ ರಾಷ್ಟ್ರೀಯ ಹೆದ್ದಾರಿ 209ರ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಸಿದ್ದೇಶ್ವರ್.ಎನ್ ಅವರನ್ನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ಹಾಗೂ ಮೈಸೂರು ಕಾವೇರಿ ನೀರಾವರಿ ನಿಗಮದ ಮುಖ್ಯ ಆಡಳಿತಾಧಿಕಾರಿ ಆರ್.ರಂಗಸ್ವಾಮಿ ಅವರನ್ನು ಮಂಡ್ಯ ಜಿಲ್ಲಾ ಪಂಚಾಯ್ತಿಯ ಉಪ ಕಾರ್ಯದರ್ಶಿ-1(ಆಡಳಿತ) ಹುದ್ದೆಗೆ ವರ್ಗಾಯಿಸಲಾಗಿದೆ.

      ವರ್ಗಾವಣೆ ಮಾಡಿರುವ ಮೇಲಿನ ಅಧಿಕಾರಿಗಳನ್ನು ಅವರು ಹೊಂದಿರುವ ಹುದ್ದೆಯಿಂದ ವರ್ಗಾವಣೆಗೊಂಡ ಹುದ್ದೆಗೆ 24 ಗಂಟೆಯೊಳಗೆ ಹಾಜರಾಗುವಂತೆ ಆದೇಶಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link