ಮೋಜು-ಮಸ್ತಿಗೆ ಗೋವಾಕ್ಕೆ ತೆರಳ್ತಿದ್ದ ನಾಲ್ವರ ದುರ್ಮರಣ!!

0
48

ಕಾರವಾರ :

    

      ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಹಾರವಾಡ ಬಳಿ ನಡೆದಿದೆ.

      ದೊಡ್ಡಬಳ್ಳಾಪುರ ಮೂಲದ ಮೀನಾ, ರಮೇಶ್ ಮೃತರು. ಇನ್ನು ಮಹಿಳೆ ಹಾಗೂ ಇಬ್ಬರು ಪುರುಷರ ಗುರುತು ಪತ್ತೆಯಾಗಿಲ್ಲ. ಪಲ್ಲವಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

      ದೊಡ್ಡಬಳ್ಳಾಪುರ ಮೂಲದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮನೆಯಲ್ಲಿ ಸುಳ್ಳು ಹೇಳಿ ಗೋವಾಕ್ಕೆ ತೆರಳಿದ್ದರು ಎನ್ನಲಾಗಿದೆ. ಗೋವಾದಿಂದ ಅಂಕೋಲಕ್ಕೆ ಹೋಗುತ್ತಿದ್ದ ವೇಳೆ ಕಾರಿಗೆ ಟ್ಯಾಂಕ್ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here