ಬೆಂಗಳೂರು:
ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ.
ತಿರುಚ್ಚಿಯಿಂದ ಎಚ್1ಎನ್1 ನಿಂದ ಬಳಲುತ್ತಿದ್ದ ಮದನ್ ಎನ್ನುವವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆ ತರುವಾಗ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ.
ಮೃತ ಮದನ್ ಹಂದಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ತಿರುಚಿಯಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಸಂಬಂಧಿಕರು ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಹೊಸೂರು ಸಮೀಪ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದ ತೀವ್ರತೆಗೆ ರೋಗಿ ಮದನ್, ಚಾಲಕ ಜಯ ಸೂರ್ಯ ಸೇರಿದಂತೆ ಸಂಬಂಧಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಹೊಸೂರು ಹುಡ್ಕೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ