ಬೆಂಗಳೂರು :
ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಇರುವ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೂ ಮಾರಕ ಕೊರೊನಾ ಸೋಂಕು ಭೀತಿ ಎದುರಾಗಿದೆ.
ರೇವಣ್ಣ ಅವರ ಇಬ್ಬರು ಆಪ್ತ ಸಹಾಯಕರು ಸೇರಿ ಒಟ್ಟು ಒಂಬತ್ತು ಜನರ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಲಾಗಿತ್ತು. ಎಸ್ಕಾರ್ಟ್ ವಾಹನದಲ್ಲಿ ಕಾರ್ಯನಿರ್ವಹಿಸುವ ನಾಲ್ವರು ಸಿಬ್ಬಂದಿಗಳ ಪೈಕಿ ಬೆಂಗಳೂರಿನ ಮೂವರು ಹಾಗೂ ಹಾಸನದ ಒಬ್ಬ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿರುವ ರೇವಣ್ಣರಿಗೂ ಸೋಂಕು ಭೀತಿ ತಟ್ಟಿದೆ.
ಹೀಗಾಗಿ ಇಂದು ಎಚ್.ಡಿ.ರೇವಣ್ಣ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
