ಬೆಂಗಳೂರು :
ಕೆರೆಗಳ ಮನುಷ್ಯ ಶ್ರೀಯುತ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ , ‘ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.
‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ, ದಾಸನದೊಡ್ಡಿ ಗ್ರಾಮದ ಶ್ರೀ. ಕಾಮೇಗೌಡರ ಅನನ್ಯ ಪರಿಸರ ಕಾಳಜಿಯನ್ನು ಮತ್ತು ಸಾಧನೆಯನ್ನು , ಸನ್ಮಾನ್ಯ ಪ್ರಧಾನ ಮಂತ್ರಿಗಳು , ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಉಲ್ಲೇಖಿಸಿರುತ್ತಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳು , ಕರ್ನಾಟಕ ಸರ್ಕಾರ ರವರು ಸಹ ಶ್ರೀ ಕಾಮೇಗೌಡರವರ ಅಪರಿಮಿತ ಸಾಧನೆಗಾಗಿ ‘ಉಚಿತ ಬಸ್ ಪಾಸ್’ನೀಡಲು ಆದೇಶಿಸಿರುತ್ತಾರೆ.
ಶ್ರೀ ಕಾಮೇಗೌಡರ ಕೊಡುಗೆ ಅಪಾರ, ಅದ್ಭುತ ಹಾಗೂ ಅನುಕರಣೀಯವಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲಾ ಮಾದರಿಯ ಬಸ್ಸುಗಳಲ್ಲಿ, ಅವರ ಜೀವಿತಾವಧಿಯವರೆಗೆ, ಉಚಿತವಾಗಿ ಸಂಚರಿಸಲು ಬಸ್ ಪಾಸನ್ನು ನೀಡಲು ಅನುಮತಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
