ಮೈಸೂರು:
ಕಟ್ಟಡ ಕಾರ್ಮಿಕರಿಗೆ ರಾಜ್ಯವ್ಯಾಪಿ ಸಂಚರಿಸಲು ಉಚಿತವಾಗಿ ಬಸ್ ಪಾಸ್ ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಸ್ ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ತಿಳಿಸಿದರು.
ಮೈಸೂರು ನಗರ, ಗ್ರಾಮಾಂತರ ವಿಭಾಗದ ಕೆಎಸ್‌ಆರ್ಟಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ರಾಜ್ಯದ ವಿವಿಧೆಡೆ ಸಂಚರಿಸಲು ಅನುಕೂಲವಾಗುವಂತೆ ಉಚಿತವಾಗಿ ಪಾಸ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಮೈಸೂರು ಜಿಲ್ಲೆಯ 60 ಸಾವಿರ ಕಟ್ಟಡ ಕಾರ್ಮಿಕರಿಗೆ ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಪಾಸ್ ವಿತರಿಸಲಿದ್ದು ನಂತರ ಎಲ್ಲ ಜಿಲ್ಲೆಗಳಲ್ಲಿಯೂ ಇದನ್ನು ವಿಸ್ತರಿಸಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಕೆಎಸ್‌ಆರ್ಟಿಸಿಗೆ 1600 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ಸಾರ್ವಜನಿಕರ ಸೇವೆ ಉದ್ದೇಶದಿಂದ ಲಾಭವನ್ನು ಸೇವೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
