ವಿಜಯಪುರ :
ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕ್ಕಮಕ್ಕಳ ರೋಟೋ ವೈರಸ್ ಔಷಧಿಯನ್ನು ಉಚಿತವಾಗಿ ವಿತರಣೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 4,590 ರೂ. ಬೆಲೆಯಲ್ಲಿ ಲಭ್ಯವಿರುವ ಈ ಔಷಧಿ, ಇನ್ಮುಂದೆ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಗಲಿದೆ. ಅಷ್ಟೇ ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಜೊತೆ ಬರುವ ಜನಕ್ಕೆ ತಂಗುದಾಣ, ಸುಲಭ ಶೌಚಾಲಯ, ಸ್ನಾನಕ್ಕೆ ಬಿಸಿನೀರು ಹಾಗೂ 24/7 ಗಂಟೆ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಕಟಿಸಿದರು.
ವೈದ್ಯಕೀಯ ಯಂತ್ರೋಪಕರಣಗಳಿಗೆ ಹೆಚ್ಚಿನ ಆದ್ಯತೆ ನೀಡವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ಪರಿಸ್ಥಿತಿಯನ್ನು ಅವಲೋಕಿಸಿ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಇನ್ನು ರಾಜ್ಯಾದ್ಯಂತ 75 ನೂತನ ವೈದ್ಯಕೀಯ ಕಾಲೇಜ್ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಅದರಲ್ಲಿ ವಿಜಯಪುರ ಜಿಲ್ಲೆಗೆ ಆದ್ಯತೆ ನೀಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
