ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ‘ಕೈ’ ಸಭೆ : ಪರಂ ಗೈರು!!!

ಬೆಂಗಳೂರು:

     ಮತ್ತೊಮ್ಮೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಗೆ ಗೈರಾಗುವ ಮೂಲಕ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್​​ ಮುನಿಸು ಮುಂದುವರೆಸಿದ್ದಾರೆ ಎನ್ನಲಾಗಿದೆ.

    ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಕಸರತ್ತು ನಡೆಸಿದ್ದು, ಇಂದು ಕೆಪಿಸಿಸಿ ಚುನಾವಣಾ ಸಮಿತಿ ಸಭೆ ನಡೆಸಿದೆ.

     ಸಭೆಯ ಆರಂಭಕ್ಕೂ ಮುನ್ನ ಪರಮೇಶ್ವರ್ ಅವರಿಗಾಗಿ ಕಾದು ಕೊನೆಗೆ ಸಭೆ ಆರಂಭಿಸಿದ ಕೈ ನಾಯಕರು, ಸಭೆಯಿಂದಲೇ ಪರಮೇಶ್ವರ್ ಗೆ ವೇಣುಗೋಪಾಲ್ ಹಾಗೂ ದಿನೇಶ್ ಗುಂಡೂರಾವ್ ಕರೆ ಮಾಡಿ ಮಾತನಾಡಿದರು. ಈ ವೇಳೆ ಪರಂ, ಚಿಕ್ಕಮಗಳೂರಿಗೆ ಹೋಗಿದ್ದೇನೆ ಬರುವುದು ತಡವಾಗುತ್ತದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಗೆ ಪರಮೇಶ್ವರ್ ಗೈರಾಗಿದ್ದಾರೆ.

      ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ಎಚ್​.ಸಿ ವೇಣುಗೋಪಾಲ್​​, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಂಸದ ಕೆ.ಎಚ್​​ ಮುನಿಯಪ್ಪ, ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಗಳಾದ ವಿಷ್ಣುನಾಥನ್, ಸಾಕೇಜ್ ಶೈಲಜನಾಥನ್, ಕೆ.ಜೆ ಜಾರ್ಜ್, ಜಮೀರ್ ಅಹಮ್ಮದ್ ಹೀಗೆ ಹಲವರು ಭಾಗಿಯಾಗಿದ್ದರು.

       ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ ಪರಮೇಶ್ವರ್​​ ಮಾತ್ರ ಹಿಂದಿನಂತೆಯೇ ಈ ಬಾರಿಯೂ ಸಭೆಯಲ್ಲಿ ಭಾಗಿಯಾಗದೇ ಸಭೆಗೆ ಗೈರಾಗಿರುವುದು ರಾಜಕೀಯ ವಲಯದಲ್ಲಿ ಬೇರೆಯದ್ದೇ ರೀತಿಯ ಚರ್ಚೆಗೆ ಕಾರಣವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link