ಬೆಂಗಳೂರು :
ಕರ್ನಾಟಕ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಇದೇ ಹೊತ್ತಿನಲ್ಲಿ ರಾಜಕೀಯ ನಾಯಕರ ಮಧ್ಯೆ ಮುನಿಸುಗಳು ಪ್ರದರ್ಶನವಾಗುತ್ತಿವೆ. ಇತ್ತ ಡಿಸಿಎಂ ಪರಮೇಶ್ವರ್ ತಮ್ಮ ಸ್ವಪಕ್ಷೀಯ ನಾಯಕರ ಮೇಲೆಯೇ ಮುನಿಸುಗೊಂಡಿದ್ದಾರೆ.
ಹೌದು, ಸೀಟು ಹಂಚಿಕೆಯಲ್ಲಿ ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರುವುದು ಬೇಸರ ತಂದಿದೆ. ತುಮಕೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇತ್ತು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಕಾಂಗ್ರೆಸ್ ಬಿಟ್ಟುಕೊಟ್ಟ ಹಿನ್ನಲೆ ಕಾಂಗ್ರೆಸ್ ಮುಖಂಡರ ಮೇಲೆ ಸಿಟ್ಟುಗೊಂಡಿರುವ ಡಿಸಿಎಂ, ಇಂದು ದೆಹಲಿಗೆ ಪ್ರಯಾಣಿಸಿ, ಪಕ್ಷದ ವರಿಷ್ಠರ ಜೊತೆಗೆ ಮಾತುಕತೆ ನಡೆಸಬೇಕಿತ್ತು.
ಆದರೇ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ಚರ್ಚಿಸಲು ದೆಹಲಿಗೆ ಹೊರಟಿದ್ದ ಪರಮೇಶ್ವರ್ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ರಾಹುಲ್ ಗಾಂಧಿ ಕಲಬುರಗಿ ಸಮಾವೇಶದಲ್ಲೇ ಸಿಗುವ ಕಾರಣದಿಂದಾಗಿ ತಮ್ಮ ಪ್ರವಾಸ ರದ್ದು ಮಾಡಿದ್ದಾಗಿ ತಿಳಿದು ಬಂದಿದೆ.
ಸಮಾವೇಶದಲ್ಲಿಯೇ ಡಿಸಿಎಂ ಜಿ ಪರಮೇಶ್ವರ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ, ತಮ್ಮ ಅಸಮಾಧಾನವನ್ನು ಹೊರ ಹಾಕಲಿದ್ದಾರೆ ಎನ್ನಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ