ಗದಗ : ನಾಳೆ ಪರೀಕ್ಷೆಗೆ ಹಾಜರಾಗಬೇಕಿದ್ದ SSLC ವಿದ್ಯಾರ್ಥಿಗೆ ಕೊರೊನಾ!!

ಗದಗ :

      ನಾಳೆ ನಡೆಯಲಿರುವ ಪರೀಕ್ಷೆಗೆ ಹಾಜರಾಗಬೇಕಿದ್ದಂತ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬನಿಗೆ ಕೊರೋನಾ ಸೋಂಕು ತಗುಲಿದೆ. 

     ಈ ಕುರಿತಂತೆ ಮಾಹಿತಿ ನೀಡಿರುವ ಗದಗ ಜಿಲ್ಲಾಧಿಕಾರಿ ಹಿರೇಮಠ, ಗದಗದಲ್ಲಿ ನಡೆಯಲಿದ್ದ ಪರೀಕ್ಷೆಗೆ ಹಾಜರಾಗಲು ವಿಜಯಪುರದಿಂದ ವಿದ್ಯಾರ್ಥಿ ಆಗಮಿಸಿದ್ದನು.  ವಿದ್ಯಾರ್ಥಿಗೆ ಕೊರೋನಾ ಲಕ್ಷಣ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ವಿದ್ಯಾರ್ಥಿಯ ಲ್ಯಾಬ್ ರಿಪೋಟ್ ಬಂದಿದ್ದು, ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. 

      ಹೀಗಾಗಿ ವಿದ್ಯಾರ್ಥಿಯನ್ನು ಜಿಮ್ಸ್ ನ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಯ ಸಂಪರ್ಕದಲ್ಲಿದ್ದಂತ ಇತರರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

     ಕೊರೋನಾ ಪಾಸಿಟಿವ್ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹಲವು ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ವಿದ್ಯಾರ್ಥಿ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾಡಳಿತ ತೊಡಗಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap