ಡಿ.18 – 19 ರಂದು ಗಗನಚುಕ್ಕಿ ಜಲಪಾತೋತ್ಸವ!!

ಮಂಡ್ಯ :

      ಮಳವಳ್ಳಿಯ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮವು ಡಿಸೆಂಬರ್ 18 ಹಾಗೂ 19 ರಂದು ನಡೆಯಲ್ಲಿದ್ದು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾllಎಂ.ವಿ.ವೆಂಕಟೇಶ್ ಅವರು ತಿಳಿಸಿದ್ದಾರೆ.

      ಇಂದು ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಗನಚುಕ್ಕಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಇದು ರಾಜ್ಯದ ಹಾಗೂ ದೇಶದ ನಾನಾ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ರಾಜ್ಯ ಹಾಗೂ ದೇಶಕ್ಕೆ ಪರಿಚಯ ಮಾಡಿಕೊಡುವ ಸಲುವಾಗಿ ಗಗನಚುಕ್ಕಿ ಜಲಪಾತೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

       ಕೆಎಸ್‌ಆರ್‌ಟಿಸಿ ಹೆಚ್ಚು ಬಸ್‌ಗಳನ್ನು ಪ್ರವಾಸಿಗರಿಗೆ ಅನುಕೂಲಕ್ಕಾಗಿ ನಿಯೋಜಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಮಿತಿಯನ್ನು ರಚಿಸಲಾಗುವುದು. ಜಲಪಾತಕ್ಕೆ ಹಾಗೂ ವೇದಿಕೆಗೆ ವಿದ್ಯುತ್‌ ಅಲಂಕಾರ ಮಾಡಬೇಕು. ಇಲ್ಲಿವಿದ್ಯುತ್‌ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಈ ಸಂದರ್ಭದಲ್ಲಿ ಜನರಿಗೆ ಜಲ ಸಾಹಸ ಕ್ರೀಡೆ, ಹೆಲಿಕಾಪ್ಟರ್ ರೈಡ್, ತೆಪ್ಪೋತ್ಸವ, ಗಾಳಿಪಟ ಉತ್ಸವ, ಬೈಕ್  ರ್ಯಾಲಿ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

      ಆಗಮಿಸುವ ಪ್ರವಾಸಿಗರ ಹಾಗೂ ಜನರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ಮಾಡಲು ಸ್ಥಳದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದು ಸೆರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸಿ ನೆರವಾಗಬೇಕು ಎಂದು ತಿಳಿಸಿದರು ಎಂದು ಅವರು ತಿಳಿಸಿದರು.

       ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ವೀಕ್ಷಿಸಲು ಹೆಚ್ಚು ಜನರು ಬರಬೇಕು.  ಇದಕ್ಕಾಗಿ ಹೆಚ್ಚು ಪ್ರಚಾರ ಮಾಡಿ ಇಲ್ಲಿನ ನೈಸರ್ಗಿಕವಾದ ಸ್ಥಳವನ್ನು ದೇಶಕ್ಕೆ ಪರಿಚಯಿಸುವ ಕೆಲಸವಾಗಬೇಕು. ಜಲಪಾತೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಹಾಕಿಕೊಂಡು ಮೂಲಭೂತ ಸೌಕರ್ಯಗಳಾದ ಒದಗಿಸಲು ಸೂಕ್ತ ಕ್ರಮಗಳನ್ನು ವಹಿಸಬೇಕು. ಆ ಮೂಲಕ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರೂ ಸಹಕರಿಸಬೇಕು. ವೇದಿಕೆಯನ್ನು ಸಮರ್ಪಕವಾಗಿ ಹಾಗೂ ಗುಣಮಟ್ಟದಿಂದ ನಿರ್ಮಾಣ ಮಾಡಬೇಕು. ಜೊತೆಗೆ ವೇದಿಕೆ ಪಕ್ಕದಲ್ಲಿ ಆಹಾರ ಮೇಳದ ಸ್ಟಾಲ್ ಗಳನ್ನು ತೆರೆಯಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap