ದೆಹಲಿ:
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ರಾಹುಲ್ ಗಾಂಧಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರೂ ಕೇರಳ ತಲುಪಿದ್ದು, ನಾಮಪತ್ರ ಸಲ್ಲಿಕೆ ವೇಳೆ ಅವರೂ ಸಹೋದರ ರಾಹುಲ್ ಗಾಂಧಿ ಅವರಿಗೆ ಜೊತೆಯಾಗಲಿದ್ದಾರೆ.
Congress President @RahulGandhi is received by a huge crowd of well wishers as he arrives in Calicut to file his nomination for the Lok Sabha elections from the Wayanad constituency. @INCKerala pic.twitter.com/aKcjl9lMOp
— Congress (@INCIndia) April 3, 2019
ಇಂದು ಕಲ್ಪೆಟ್ಟಾದಲ್ಲಿ ರಾಹುಲ್ ಗಾಂಧಿ ಅವರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಎ.ಆರ‍್. ಅಜಯ್ ಕುಮಾರ‍್ ಅವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದು, ನಂತರ 11:30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರಸಲ್ಲಿಕೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಮುಖಂಡರಾದ ರಮೇಶ್ ಚೆನ್ನಿತಾಲ, ಮುಕುಲ್ ವಾಸ್ನಿಕ್, ಕೆಸಿ ವೇಣುಗೋಪಾಲ್, ಓಮನ್ ಚಾಂಡಿ, ಮುಳ್ಳಪಲ್ಲಿ ರಾಮಚಂದ್ರನ್ ಮುಂತಾದವರು ಜೊತೆಯಾಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ