ಬೆಂಗಳೂರು :
ರಾಜ್ಯದ ಎಲ್ಲಾ ಸಣ್ಣ, ಅತೀ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಮತ್ತು ಗಾರ್ಮೆಂಟ್ ಕಾರ್ಖಾನೆಗಳನ್ನು ಮಾ.31ರವರೆಗೆ ಬಂದ್ ಮಾಡಲು ಕೈಗಾರಿಕೋದ್ಯಮಿಗಳ ನಿರ್ಧರಿಸಿದ್ದಾರೆ.
ಇದುವರೆಗೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಿಗೆ, ವಿವಿಗಳಿಗೆ ಸರ್ಕಾರಿ ಕಚೇರಿಗಳಿಗಷ್ಟೇ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಕಾರ್ಖಾನೆಗಳನ್ನು ಮಾರ್ಚ್ 31ರ ವರೆಗೆ ಬಂದ್ ಮಾಡುವಂತೆ ಎಫ್ ಕೆ ಸಿ ಸಿ ಐ ಆದೇಶಿಸಿದೆ.
ಈ ಕುರಿತಂತೆ ಮಾಹಿತಿ ನೀಡಿದ ಎಫ್ ಕೆ ಸಿ ಸಿ ಐ ಅಧ್ಯಕ್ಷ ಜನಾರ್ಧನ್, ರಾಜ್ಯದಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 31, 2020ರ ವರೆಗೆ ರಾಜ್ಯದ ಎಲ್ಲ ಕಾರ್ಖಾನೆಗಳನ್ನು ಬಂದ್ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಗಾರ್ಮೆಂಟ್ ಕೂಡ ಬಂದ್ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಖಾನೆ, ಗಾರ್ಮೆಂಟ್ಸ್ ಕ್ಲೋಸ್ ಆದರೂ ಸಹಾ ಉದ್ಯೋಗಿಗಳಿಗೆ ವೇತನ ನೀಡಬೇಕು. ಒಂದು ವೇಳೆ ಬಂದ್ ಮಾಡದೇ, ಕಾರ್ಖಾನೆಗಳನ್ನು ನಡೆಸಿದ್ದೇ ಆದರೆ, ಅಂತಹ ಕಾರ್ಖಾನೆ, ಗಾರ್ಮೆಂಟ್ಸ್ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂಬುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಹೀಗಾಗೀ ರಾಜ್ಯದ ಎಲ್ಲ ಕಾರ್ಖಾನೆ, ಗಾರ್ಮೆಂಟ್ಸ್ ಮಾರ್ಚ್ 31ರ ವರೆಗೆ ಬಂದ್ ಆಗಲಿದೆ.
ಉದ್ಯೋಗಿಗಳಿಗೂ ಯಾವುದೇ ಸಮಸ್ಯೆ ಆಗದಂತೆ ಕಾರ್ಖಾನೆ, ಗಾರ್ಮೆಂಟ್ಸ್ ಬಂದ್ ಆದ್ರೂ ಕೂಡ ವೇತನ ಸಿಗಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಮತ್ತಷ್ಟು ಜನರಿಗೆ ಹರಡದಂತೆ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ