ಹಾಸನ:
ಕಡಿಮೆ ವೇತನ ನೀಡುತ್ತಿರುವುದಾಗಿ ಆರೋಪಿಸಿ ಗಾರ್ಮೆಂಟ್ಸ್ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ ಘಟನೆ ಹಾಸನದಲ್ಲಿ ಬುಧವಾರ ನಡೆದಿದೆ.
ನಗರದ ಕೈಗಾರಿಕಾ ಪ್ರದೇಶದ ಹಿಮತ್ ಸಿಂಗ್ ಕಾಲೇನಿನ್ ಕಾರ್ಖಾನೆಯಲ್ಲಿ ಸ್ಥಳೀಯ ಹಾಗೂ ಹೊರರಾಜ್ಯದ ನೌಕರರ ನಡುವೆ ಘರ್ಷಣೆ ನಡೆದಿದ್ದು, ಪ್ರತಿಭಟನಾ ನಿರತ ನೌಕರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿಚಾರ್ಜ್ ನಡೆಸಿದ್ದು, ಇದರಿಂದ ಹಲವು ನೌಕರರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಎಲ್ಲಾ ಬೇರೆ ರಾಜ್ಯಗಳ ಜನರೇ ತುಂಬಿಕೊಂಡಿದ್ದಾರೆ ತಮ್ಮ ಮೇಲೆ ದೌರ್ಜನ್ಯವಾಗ್ತಿದೆ ಎಂದು ಆರೋಪಿಸಿ ಪ್ರತಿಭಟನಾ ನಿರತ ನೌಕರರು ಧರಣಿ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾ ರೂಪಕ್ಕೆ ತಿರುಗಿದ್ದು, ಗಾರ್ಮೆಂಟ್ಸ್‌ನ ಎಚ್‌ಆರ್ ವಿರುದ್ಧ ಹಲ್ಲೆ ಮಾಡಿರುವ ಬಗ್ಗೆ ಆರೋಪಿಸಿ ಗಾರ್ಮೆಂಟ್ಸ್ ನೌಕರರಿಗೆ ಪೊಲೀಸರು ಲಾಠಿಯೇಟು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
