ನವದೆಹಲಿ :
ಗ್ಯಾಸ್ ಸೋರಿಕೆಯಿಂದಾಗಿ ಒಂದು ಮಗು ಸೇರಿದಂತೆ 9 ಮಂದಿ ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ.
ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ.
ಪರಿಣಾಮ ಬೆಳಗ್ಗೆ ವಾಕಿಂಗ್ ಗೆ ಮತ್ತು ಇತರೆ ಕಾರ್ಯಗಳಿಗೆ ಬಂದವರು ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ. ಮೂಲಗಳ ಪ್ರಕಾರ ಸುಮಾರು 1 ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಸ
ದ್ಯ ಅಗ್ನಿ ಶಾಮಕದಳ ಹಾಗೂ ನೌಕ ಸೇನೆಯಿಂದ ಕಾರ್ಯಾಚರಣೆ ಶುರುವಾಗಿದೆ. ಉಸಿರಾಟದ ತೊಂದರೆ ಇರುವವರಿಗೆ ಕೃತಕ ಆಮ್ಲಜನಕದ ವ್ಯವಸ್ಥೆ ಮಾಡಲಾಗಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ಸಾಗಿಸಲು ರಾಷ್ಟ್ಪೀಯ ವಿಪತ್ತು ನಿರ್ವಹಣಾ ದಳ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳನ್ನು ನಿಯೋಜಿಸಲಾಗಿದ್ದು,. ಇದೀಗ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನಲಾಗಿದೆ.
ಗ್ಯಾಸ್ ಸೋರಿಕೆ 3 ಕಿ.ಮೀ. ಸುತ್ತಮುತ್ತ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಕಂಪನಿಯ ಸುತ್ತಲಿನ 5 ಗ್ರಾಮಗಳನ್ನು ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ ವಿನಯ್ ಚಾಂದ್ ಅವರು ದೌಡಾಯಿಸಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ