ಹಾಸನ:
ಸಕಲೇಶಪುರ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಎಲ್‌ಪಿಜಿ ಬುಲೆಟ್ ಟ್ಯಾಂಕರ್ ಲಾರಿ ಮಗುಚಿ ಅನಿಲ ಸೋರಿಕೆಯಾಗಿದೆ.
ಮಧ್ಯಾಹ್ನ 12 ಗಂಟೆಯ ವೇಳೆಗೆ ಪಟ್ಟಣದ ಚೆಸ್ಕಾಂ ಕಚೇರಿ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಎಲ್‍ಪಿಜಿ ಟ್ಯಾಂಕರಿನ ಮುಖ್ಯ ವಾಲ್ವ್ ನ ಬೋಲ್ಟ್ ತುಂಡಾದ ಪರಿಣಾಮ ಭಾರಿ ಪ್ರಮಾಣದ ಅನಿಲ ಸೋರಿಕೆ ಉಂಟಾಗಿದೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ತಂಡ ಸತತವಾಗಿ ನೀರನ್ನು ಹಾಯಿಸಿ ಟ್ಯಾಂಕರ್ ಸ್ಫೋಟಗೊಳ್ಳದಂತೆ ಮಾಡುವಲ್ಲಿ ಯಶಸ್ವಿಯಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಪದವಿ ಪೂರ್ವ ಕಾಲೇಜು, ಬಾಲಕಿಯರ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕೃಷಿ ಇಲಾಖೆ, ಬಾಲಕಿಯರ ವಸತಿ ನಿಲಯ, ಸೆಸ್ಕ್, ನಾಡ ಕಚೇರಿ, ಉರ್ದು ಶಾಲೆ ಬಂದ್ ಮಾಡಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
