ಸಿಬ್ಬಂದಿಗೆ ಕೊರೊನಾ : ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ನಿರ್ಬಂಧ!!

ಬೆಂಗಳೂರು : 

     ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಲಾಗಿದೆ.

     ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೆಲಸ ಮಾಡುವ 6 ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

     ಈ ಹಿನ್ನೆಲೆಯಲ್ಲಿ ದೇವಾಲಯವನ್ನು ಬಂದ್ ಮಾಡಲಾಗಿದೆ. 48 ಗಂಟೆಗಳ ಕಾಲ ಭಕ್ತರು ದೇವಾಲಯಕ್ಕೆ ಆಗಮಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

      ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಸ್ಯಾನಿಟೈಸ್ ಸೇರಿದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap