ಬೆಂಗಳೂರು :
ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಕೆಲಸ ಮಾಡುವ 6 ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ದೇವಾಲಯವನ್ನು ಬಂದ್ ಮಾಡಲಾಗಿದೆ. 48 ಗಂಟೆಗಳ ಕಾಲ ಭಕ್ತರು ದೇವಾಲಯಕ್ಕೆ ಆಗಮಿಸದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಸ್ಯಾನಿಟೈಸ್ ಸೇರಿದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ