ಬೆಂಗಳೂರು:
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ ಗಿರೀಶ್ ಕಾರ್ನಾಡ್ (81) ಅವರ ನಿಧನದ ಹಿನ್ನೆಲೆ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸರ್ಕಾರಿ ರಜೆ ಘೋಷಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿಗಳ ಕಛೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಸಾಹಿತಿ ಗಿರೀಶ್ ಕಾರ್ನಾಡ್ ಗೌರವಾರ್ಥ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಚರಣೆ ನಡೆಸಲಿದ್ದು, ಇಂದು ಸರ್ಕಾರಿ ಕಛೇರಿಗಳು ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಂದು ತಿಳಿಸಲಾಗಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ