ಶಿವಮೊಗ್ಗ :
ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಅಣ್ಣನಿಂದಲೇ ನಿರಂತರ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿ ಆತ್ಮಹತ್ಯೆಯಾಗಿರುವ ಅಮಾನವೀಯ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯು ಬಾಲಕಿಯ ದೊಡ್ಡಪ್ಪನ ಮಗ ರಾಘವೇಂದ್ರ (28) ಅರಾಸುರಳಿ ಗ್ರಾಮದ ವಾಸಿಯಾಗಿದ್ದಾನೆ. ಅಪ್ರಾಪ್ತೆಗೆ ಮದುವೆಯಾಗುವುದಾಗಿ ಹೇಳಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ತಿಳಿದು ಬಂದಿದೆ. ಈತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದು, ಇತ್ತೀಚೆಗೆ ಆಕೆ ಐದು ತಿಂಗಳ ಗರ್ಭಿಣಿ ಎಂಬುದು ತಿಳಿಯುತ್ತಿದ್ದಂತೆ ನಾಪತ್ತೆಯಾಗಿದ್ದನು.
ಇದರಿಂದ ಮನನೊಂದ ಹುಡುಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಹಾಕಿಕೊಂಡು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಸಾಯುವ ಮುನ್ನ, ನನ್ನ ಸಾವಿಗೆ ರಾಘವೇಂದ್ರನೇ ಕಾರಣ ಎಂದು ಡೆತ್‍ನೋಟ್ ಬರೆದಿದ್ದು, ನನ್ನ ಸಾವಿಗೆ ರಾಘವೇಂದ್ರನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ನಂತರ ಸ್ಥಳಕ್ಕೆ ಭೇಟಿ ನೀಡಿದ್ದ ರಿಪ್ಪನ್ ಪೇಟೆ ಪೊಲೀಸರು ಡೆತ್ ನೋಟ್ ಆಧಾರದ ಮೇರೆಗೆ ಬಾಲಕಿಯ ದೊಡ್ಡಪ್ಪನ ಮಗನನ್ನು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ