ಕೋಲಾರ :
ಚಾರ್ಜ್ ಹಾಕಿ ಮೊಬೈಲ್ ನಲ್ಲಿ ಮಾತನಾಡುವಾಗ ಬಹುರಾಷ್ಟ್ರೀಯ ಕಂಪನಿಯ ಅಂಡ್ರಾಯ್ಡ್ ಮೊಬೈಲ್ ಫೋನ್ ಬ್ಲಾಸ್ಟ್ ಆದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಗಡಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ನಡೆದಿದೆ.
ಶ್ರೀದೇವಿ (19) ಮೊಬೈಲ್ ಬ್ಲಾಸ್ ಅಗಿ ಗಂಭೀರವಾಗಿ ಗಾಯಗೊಂಡಿರುವ ಯುವತಿ. ಶನಿವಾರ ರಾತ್ರಿ ತನ್ನ ಮೊಬೈಲ್ ಗೆ ಚಾರ್ಜ್ ಹಾಕಿ ಫೋನಿನಲ್ಲಿ ಮಾತನಾಡುವಾಗ ಮೊಬೈಲ್ ಬ್ಲಾಸ್ಟ್ ಆಗಿದೆ.
ಮೊಬೈಲ್ ಬ್ಲಾಸ್ಟ್ ಆದ ರಭಸಕ್ಕೆ ಮುಖ ಹಾಗೂ ಕೈಗಳಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಯುವತಿಯನ್ನು ಕುಪ್ಪಂ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಮುಖಕ್ಕೆ ಸರ್ಜರಿ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/Galaxy-Note-7.gif)