ಬೆಳಗಾವಿ:
ಕನ್ನಡದ ವಿರೋಧಿ ಹೇಳಿಕೆ ನೀಡಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಗೋಕಾಕ್ ನಲ್ಲಿ ನಡೆದ ಕನ್ನಡ ನುಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಸ್ವತ್ತು ಎಂದು ನಾನು 4 ದಿನಗಳ ಹಿಂದೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧವಾಗಿದ್ದೇನೆ. ಬಿಜೆಪಿಯಲ್ಲಿರುವ ಮರಾಠಿಗರು ಒಂದಾಗಿ ಎಂದು ಹೇಳಿಕೆ ನೀಡಿದ್ದೇನೆ ಹೊರತು ಎಂಇಎಸ್ ಗೆ ಬೆಂಬಲ ನೀಡಿಲ್ಲ. ಆ ರೀತಿ ಹೇಳಿಕೆ ನೀಡಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.
ಕನ್ನಡಪರ ಹೋರಾಟಕ್ಕೆ ನನ್ನ ಬೆಂಬಲ ಸದಾ ಇದೆ. ಕನ್ನಡ ನಾಡು, ನುಡಿ, ಕನ್ನಡಿಗರಿಗೆ ಅಪಮಾನವಾದರೆ ನಾನು ಯಾವುದೇ ತ್ಯಾಗಕ್ಕಾದರೂ ಸಿದ್ದನಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯಕ್ಕೆ ಕೆಟ್ಟದ್ದು ಮಾಡಿ ರಾಜಕಾರಣ ಮಾಡುವಂತಹ ಅಗತ್ಯ ನನಗಿಲ್ಲ. ಬಿಜೆಪಿ ಪಕ್ಷದ ಮರಾಠ ಮುಖಂಡರಿಗೆ ನೀವೆಲ್ಲಾ ಒಂದಾಗಬೇಕು. ಇಲ್ಲಿ ನಮಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ