ಮಂಗಳೂರು:
ಎಲೆಕ್ಟ್ರಿಕಲ್ ಕುಕ್ಕರ್ ನಲ್ಲಿ ಚಿನ್ನವಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಈತನಿಂದ 25 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಸುಮೇಶ್ ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ತಲುಪಿದ್ದ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆ ನಡೆಸುವ ವೇಳೆ ಆರೋಪಿ ಎಲೆಕ್ಟ್ರಿಕ್ ಕುಕ್ಕರ್ ನಲ್ಲಿರಿಸಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ. ಆರೋಪಿಯಿಂದಬರೋಬ್ಬರಿ 25,45,920 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ