ಬೆಂಗಳೂರು :
ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಡಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಅಡಕೆ ಮಂಡಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಅಡಕೆ ಮಂಡಳಿ ಸ್ಥಾಪನೆ ಸಂಬಂಧ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ವರದಿ ಸಿದ್ಧ ಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದು, ವರದಿಯಲ್ಲಿನ ಅಂಶ ಪರಿಶೀಲನೆ ನಡೆಸಿ ಅಂತಿಮ ಪರಿಷ್ಕೃತ ವರದಿ ಸಲ್ಲಿಸುವಂತೆ ತೋಟಗಾರಿಕೆ ವಿಶ್ವವಿದ್ಯಾಲಯ ತೋಟದ ಬೆಳೆಗಳ ವಿಭಾಗಕ್ಕೆ ಸೂಚಿಸಿದೆ.
ಹೀಗಾಗಿ ಅಡಕೆ ಬೆಳಗಾರರ ಕೃಷಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅಗತ್ಯ ಸಲಹೆ ಸೂಚನೆ ನೀಡುವುದು ಮತ್ತು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಅಡಕೆ ಮಂಡಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ