ಬೆಂಗಳೂರು :
ಹೊಸ ವರ್ಷಾಚರಣೆಗೆ ಮದ್ಯ ಪ್ರಿಯರಿಗೆ ಅಬಕಾರಿ ಸಚಿವ ಹೆಚ್. ನಾಗೇಶ್ ಸಿಹಿಸುದ್ದಿ ನೀಡಿದ್ದು, ಮಧ್ಯರಾತ್ರಿ 2 ಗಂಟೆಯವರೆಗೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ವರ್ಷದ ಹಿಂದಿನ ರಾತ್ರಿ ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು, ಆದರೆ, ಇದೀಗ ಸಿಎಲ್ 7 ಲೈಸನ್ಸ್ ಇರುವವರೆಗೆ 2 ಗಂಟೆ ಯವರೆಗೂ ಮದ್ಯ ಮಾರಾಟ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಡ ಜನರು ಹೆಚ್ಚು ಬಳಕೆ ಮಾಡುವ ಕಡಿಮೆ ದರದ ಮದ್ಯವನ್ನು ಸಬ್ಸಿಡಿ ದರದಲ್ಲಿ ಕೊಡಬೇಕಂದು ಸರ್ಕಾರದ ಚಿಂತನೆ ಇದೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ಸರಬರಾಜು ಮಾಡುವ ಯೋಜನೆ ರೂಪಿಸಲಾಗುತ್ತಿದೆ. ಬಿಯರ್ ಮಾರಾಟವನ್ನು ಕಡಿಮೆ ಮಾಡಿ ಹಾಟ್ ಲಿಕ್ಕರ್ ನ್ನು ಹೆಚ್ಚು ಮಾರಾಟ ಮಾಡುವಂತೆ ಅಬಕಾರಿ ಅಧಿಕಾರಿಗಳು ಮದ್ಯ ಮಾರಾಟಗಾರರ ಮೇಲೆ ಒತ್ತಡ ಹೇರುತ್ತಿರುವ ದೂರುಗಳು ಬಂದಿವೆ. ಈ ಬಗ್ಗೆ ಅಬಕಾರಿ ಆಯುಕ್ತರೊಂದಿಗೆ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿ ಬಿಯರ್ ಮಾರಾಟ ನಿಯಂತ್ರಿಸದಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ