ಬೆಂಗಳೂರು :
ರಾಜ್ಯದ ಕಬ್ಬು ಬೆಳೆಗಾರರಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಿಹಿಸುದ್ದಿ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಬ್ಬು ಬೆಳೆಯ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ಜೂನ್ 30 ರೊಳಗೆ ರೈತರಿಗೆ ಹಣ ಸಂದಾಯ ಮಾಡಬೇಕು ಇಲ್ಲದಿದ್ದರೆ ಆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಮಾರಾಟ ಮಾಡಿ ರೈತರಿಗೆ ಹಣ ನೀಡಬೇಕು ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಬ್ಬು ಬಾಕಿ ವಸೂಲಿ ಹೊಣೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಒಂದು ವೇಳೆ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಕೊಡಿಸಲು ವಿಫಲರಾದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ ಆಗುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ