ನವದೆಹಲಿ :
ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಸಕ್ಕರೆ ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ ನೀಡಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಬುಧವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60 ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗುವುದು. ಸಚಿವ ಸಂಪುಟದ ನಿರ್ಧಾರದಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಲಾಭವಾಗಲಿದೆ. ಸಬ್ಸಿಡಿ ಮೊತ್ತ ನೇರವಾಗಿ ರೈತರ ಖಾತೆಗೆ ಸೇರಲಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ