ಮೈಸೂರು :
ಕೊರೊನಾ ಆರ್ಭಟದ ನಡುವೆ ಮೈಸೂರು ವಿವಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ‘MHRD’ ಅಡಿಯಲ್ಲಿ ಕೊಡುವ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯ ಭಾಜನವಾಗಿದೆ.
ಹೌದು, ಕೇಂದ್ರ ಸರ್ಕಾರ ಮಾನವ ಸಂಪನ್ಮೂಲ ಇಲಾಖೆ ನೀಡುವ ನ್ಯಾಷನಲ್ ಇನ್ಸ್ ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್ (NIRF) ಪ್ರಶಸ್ತಿಗೆ ಮೈಸೂರು ವಿಶ್ವ ವಿದ್ಯಾನಿಲಯ ಆಯ್ಕೆಯಾಗಿದೆ.
ಕೇಂದ್ರ ಸರ್ಕಾರದ ದೇಶದ ಐಐಟಿ, ಐಸಿಗಳ ಮಾಹಿತಿಯನ್ನು ಸಂಗ್ರಹಿಸಿ ಈ ರ್ಯಾಂಕ್ ನೀಡಲಾಗಿದ್ದು, ಇಡೀ ದೇಶದಲ್ಲೇ ಮೈಸೂರು ವಿವಿ 27 ನೇ ಸ್ಥಾನದಲ್ಲಿದೆ. ಈ ಮೂಲಕ ಸಾಧನೆಯ ಹಾದಿಯಲ್ಲಿ ಮಂಚೂಣಿಯಲ್ಲಿರುವ ಮೈಸೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಪ್ರಶಸ್ತಿಯ ಗರಿ ಸಿಕ್ಕಿದಂತಾಗಿದೆ.
ಕಳೆದ ಹಲವು ದಶಕಗಳ ಬಳಿಕ ಮೈಸೂರು ವಿವಿ ಈ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್ ಕುಮಾರ್ ಸಂತಸ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ