ಬೆಂಗಳೂರು:
ಕಡ್ಡಾಯ ಶಿಕ್ಷಣ ಹಕ್ಕು(ಆರ್ ಟಿಇ) ಕಾಯ್ದೆಯನ್ನು ತಿದ್ದುಪಡಿ ಮಾಡಿ ಮೂಲ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಮುಂದಾಗಿದೆ.
ಈ ಕುರಿತು ಕಾಯಿದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ನಿರ್ಧರಿಸಿದ್ದು, 5 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಇದ್ದೂ, ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಆರ್ ಟಿಇ ಶುಲ್ಕ ವಿನಾಯಿತಿ ಸಿಗುವುದಿಲ್ಲ. ಕೇರಳದಲ್ಲಿ ಈ ಮಾದರಿ ಅನುಸರಿಸಲಾಗುತ್ತಿದೆ. ಇದೇ ಮಾದರಿಯನ್ನು ರಾಜ್ಯದಲ್ಲೂ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಮೂಲಕ ಸರ್ಕಾರಿ ಶಾಲೆಯನ್ನು ಉಳಿಸಲು ಸರ್ಕಾರ ಮುಂದಾಗಿದ್ದು, ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ಬಡ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ಆರ್ ಟಿಇ ಸೀಟು ಉಚಿತವಾಗಿ ಸಿಗುವುದಿಲ್ಲ. ಒಂದು ವೇಳೆ ಸುತ್ತಮುತ್ತ ಸರ್ಕಾರಿ ಶಾಲೆ ಇಲ್ಲವಾದರೆ ಮಾತ್ರ ಅವಕಾಶ ನೀಡಲಾಗುತ್ತದೆ. ಬಡ ವಿದ್ಯಾರ್ಥಿಗಳ ಪ್ರದೇಶದ ಸುತ್ತಮುತ್ತ ಸರ್ಕಾರಿ ಶಾಲೆ ಇದ್ದರೆ ಅಂತಹ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ಉಚಿತ ಸೀಟು ಸಿಗುವುದಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
