ಬೆಂಗಳೂರು:
ಮುಂದಿನ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅವರು ಇಂದು ಅದಮ್ಯ ಚೇತನ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪೌಷ್ಟಿಕಾಂಶ ಯುಕ್ತ ಹಾಲು ನೀಡುವ ಯೋಜನೆಗೆ ಸುರೇಶ್ ಕುಮಾರ್ ಇಂದು ಚಾಲನೆ ನೀಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತ, ಪ್ರಸ್ತುತ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಆದರೆ, ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ನೀಡಬೇಕೆಂಬ ಬೇಡಿಕೆಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ ಮಾಡುವ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಎಂದಿದ್ದಾರೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಸದ್ಯದಲ್ಲೇ ಅಂತಿಮ ಸಭೆ ನಡೆಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿತರಣೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ