ಬೆಂಗಳೂರು:
ಬಿಬಿಎಂಪಿ ಆಯುಕ್ತರಾಗಿದ್ದ ಬಿ ಎಚ್ ಅನಿಲ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಕರೋನವನ್ನು ಬೆಂಗಳೂರಿನಲ್ಲಿ ಮಟ್ಟ ಹಾಕುವ ನಿಟ್ಟಿನಲ್ಲಿ ಬಿ.ಹೆಚ್ ಅನಿಲ್ ಕುಮಾರ್ ಅವರು ಸರಿಯಾಗಿ ಕೆಲಸ ಮಾಡಿಲ್ಲ ಎನ್ನಲಾಗಿದ್ದು, ಕರೋನದ ಸಮಯದಲ್ಲಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದು, ಇವರ ವಿರುದ್ದ ಕೋಟ್ಯಾಂತರ ರೂಪಾಯಿ ಹಗರಣದ ಆರೋಪ ಕೂಡ ಇದ್ದು, ಅನಿಲ್ ಕುಮಾರ್ ಅವರನ್ನು ಮುಂದಿನ ಆದೇಶದವರೆಗೆ ಸಾರ್ವಜನಿಕ ಉದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಸದ್ಯ ಅನಿಲ್ ಕುಮಾರ್ ಅವರ ತೆರವಿನಿಂದ ಆದ ಜಾಗಕ್ಕೆ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ