ಬೆಂಗಳೂರು:
ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೂ ‘ಆರೋಗ್ಯ ಭಾಗ್ಯ ಯೋಜನೆ’ ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ.
ಪೋಲೀಸ್ ಇಲಾಖೆಗೆ ಈಗಾಗಲೇ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನೆ ಸಿಗುತ್ತಿದೆ. ಅದನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿ ಆಧರಿಸಿದ ಸಿಎಂ ಸೋಮವಾರ ಸಂಜೆ ಈ ಸಂಬಂಧ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದು, ಅದರಂತೆ 15 ಲಕ್ಷಕ್ಕೂ ಅಧಿಕ ಸರಕಾರಿ ನೌಕರರಿಗೆ ಪ್ರಯೋಜನವಾಗಲಿದೆ.
ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರ ಚಿಕಿತ್ಸೆ ಮತ್ತು ವೈದ್ಯ ವೆಚ್ಚ ಪಾವತಿಸಲು ವರ್ಷಗಟ್ಟಲೇ ವಿಳಂಬವಾಗುತ್ತಿತ್ತು. ಅನುದಾನದ ಕೊರತೆ ಹಿನ್ನಲೆ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿ ಪಡೆಯೋದು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಪರಿವರ್ತನೆ ಮಾಡಬೇಕೆಂದು ಸರಕಾರಿ ನೌಕರರ ಸಂಘ ಮನವಿ ಮಾಡಿತ್ತು. ಹಾಗಾಗಿ ಆರೋಗ್ಯ ಭಾಗ್ಯವನ್ನು ಎಲ್ಲ ಸರಕಾರಿ ನೌಕರರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ