ಬೆಂಗಳೂರು:
ಇಂದು ಮಧ್ಯಾಹ್ನ 1:30ರೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯಪಾಲರು ಡೆಡ್ಲೈನ್ ನೀಡಿದ್ದರೂ ವಿಶ್ವಾಸಮತಯಾಚನೆ ಮಾಡಲು ಸಿಎಂ ವಿಫಲರಾದ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗಳೊಳಗೆ ವಿಶ್ವಾಸಮತಯಾಚನೆ ಮಾಡಿ ಎಂದು ರಾಜ್ಯಪಾಲರಿಂದ ಸಿಎಂಗೆ ಮರುಜ್ಞಾಪನಪತ್ರ ರವಾನೆಯಾಗಿದೆ.
ಇನ್ನೂ ಊಟದ ವಿರಾಮಕ್ಕೂ ಮುನ್ನ ಮಧ್ಯಾಹ್ನ 1:30 ಆದರೂ ವೋಟ್ ಮಾತ್ರ ನಡೆಯಲೇ ಇಲ್ಲ. ಈ ವೇಳೆ ಯಡಿಯೂರಪ್ಪನವರು ಎದ್ದು ನಿಂತು ಸ್ಪೀಕರ್ ಅವರಲ್ಲಿ ಈ ಪ್ರಕ್ರಿಯೆ ಕೂಡಲೇ ಮುಗಿಸಿಕೊಡಿ ಎಂದು ಮನವಿ ಮಾಡಿದರು.
ಯಡಿಯೂರಪ್ಪ ಮನವಿಗೆ ಸ್ಪೀಕರ್, ನನಗೆ ಯಾವುದೇ ಆದೇಶ ಬಂದಿಲ್ಲ. ಆದೇಶ ಬಂದಿರುವುದು ಸಿಎಂ ಅವರಿಗೆ. ಕಲಾಪ ಹೇಗೆ ನಡೆಯಬೇಕೋ ಹಾಗೆ ನಡೆಸುತ್ತೇನೆ. ಚರ್ಚೆಯಾದ ಬಳಿಕ ಮತಕ್ಕೆ ಹಾಕಲಾಗುವುದು ಎಂದು ತಿಳಿಸಿದರು. ಈ ವೇಳೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಗದ್ದಲ ನಡೆದ ಪರಿಣಾಮ ಕಲಾಪವನ್ನು ಸ್ಪೀಕರ್ ಮುಂದಕ್ಕೆ ಹಾಕಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ