ಬೆಂಗಳೂರು :
ಶಿವಾಜಿನಗರದ ಐಎಮ್ ಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ಖಾನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.
#IMAJewels ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ @MBPatil ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
— CM of Karnataka (@CMofKarnataka) June 11, 2019
ಈ ಬಗ್ಗೆ ಟ್ವಿಟರ್‌ನಲ್ಲಿ ಹೇಳಿಕೊಂಡಿರುವ ಸಿಎಂ ಹೆಚ್‌ಡಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂಬಿಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಅಂತ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ