ಬೆಂಗಳೂರು
ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ನಡೆದ ಸಭೆಯಲ್ಲಿ ಭಾಷಣ ಮಾಡಿದ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಪೊಲೀಸರು ಬಂಧಿಸಿದ್ದು, ಇದು ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನೀಡುತ್ತಿರುವ ಅಗೌರವವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಟೀಕಿಸಿದ್ದಾರೆ.
ಎಲ್ಲಾ ರೀತಿಯ ವಿರೋಧದ ನಡುವೆಯೂ ಟಿಪ್ಪು ಜಯಂತಿ ಹಮ್ಮಿಕೊಂಡಿದ್ದು ಈ ಸರ್ಕಾರದ ಮೂರ್ಖತನವನ್ನು ಸಾಬೀತುಪಡಿಸುತ್ತದೆ. ಅದರಲ್ಲೂ ಆಚರಣೆಯನ್ನು ವಿರೋಧಿಸಿದವರನ್ನು ಬಂಧಿಸಿ, ದಮನಕಾರಿ ಪ್ರವೃತ್ತಿಯನ್ನು ಸರ್ಕಾರ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.
ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಓಲೈಕೆ ರಾಜಕಾರಣ ಮಾಡಿದ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಮಾತನಾಡಿದರೆ ಬಂಧಿಸುವು ಎಷ್ಟರ ಮಟ್ಟಿಗೆ ಸರಿ. ಬಂಧಿತ ಸಂತೋಷ್ ತಮ್ಮಯ್ಯ ಅವರನ್ನು ಬಂಧಿಸಲಾಗಿದ್ದು, ತಕ್ಷಣವೇ ಬಿಡುಗಡೆ ಮಾಡಬೇಕು. ಈ ರೀತಿಯ ದಮನಕಾರಿ ನೀತಿ ಮುಂದುವರೆದರೆ, ರಾಜ್ಯಾದ್ಯಂತ ಸರ್ಕಾರದ ಧೋರಣೆ ವಿರುದ್ಧ ಹೋರಾಟ ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








