ಬೆಂಗಳೂರು :
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ತಲೆದೂರಿರುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಧರ್ಮಸ್ಥಳದಲ್ಲಿ ನೀರಿನ ಅಭಾವ ತಲೆದೂರಿರುವ ಕುರಿತು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಲಹೆಯಂತೆ ಟಿ.ಎಂ. ವಿಜಯಭಾಸ್ಕರ್ ಅವರು ವಿರೇಂದ್ರ ಹೆಗಡೆ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ವೀರೇಂದ್ರ ಹೆಗಡೆ ಅವರು ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದು, ಇನ್ನೊಂದು ಚೆಕ್ ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ ನೀರಿನ ಕೊರತೆ : ಪ್ರವಾಸ ಮುಂದೂಡಲು ಭಕ್ತರಲ್ಲಿ ಮನವಿ!!
ನೇತ್ರಾವತಿ ನದಿಯ ಪೂರಕ ನದಿಯ ನೀರು ಇಂಗುತ್ತಿದೆ. ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ತಕ್ಷಣ ಯೋಚನೆ ಮಾಡಬೇಕು. ಇಂದು ಮಾತ್ರವಲ್ಲ ಮುಂದಿನ 15ರಿಂದ 20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಪಶ್ಚಿಮಘಟ್ಟದಲ್ಲಿ ಅರಣ್ಯನಾಶದಿಂದ ನೀರಿನ ಸಮಸ್ಯೆ ಉಂಟಾಗುತ್ತಿದೆ. ಅರಣ್ಯವನ್ನು ಉಳಿಸುವತ್ತ ಸರಕಾರ ಮತ್ತು ಪರಿಸರ ತಜ್ಞರು ಗಮನ ಹರಿಸಬೇಕು ಎಂದು ಹೆಗ್ಗಡೆ ಅವರು 2 ದಿನಗಳ ಹಿಂದೆ ಕಿವಿಮಾತು ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
