ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ!?

ಬೆಂಗಳೂರು:

 

      ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನಿಯಮಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

      ರಾಜ್ಯ ಸಚಿವ ಸಂಪುಟದ ಮೂರು ದಶಕಗಳ ಹಳೆಯ ಡಾ. ಸರೋಜಿನಿ ಮಹಿಷಿ ಸಮಿತಿಯ ಶಿಫಾರಸ್ಸನ್ನು ಜಾರಿಗೆ ತರಲು ನಿರ್ಧರಿಸಿದ್ದು, ಖಾಸಗಿ ಸಂಸ್ಥೆಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳ ನೇಮಕಾತಿಯಲ್ಲಿ ಶೇಕಡಾ 100ರಷ್ಟು ಮೀಸಲಾತಿಯನ್ನು ಕನ್ನಡಿಗರಿಗೆ ನೀಡಬೇಕು ಎಂದು ತೀರ್ಮಾನಿಸಿದೆ.

Related image

      ಶಿಫಾರಸಿಗೆ ಇದುವರೆಗೆ ಯಾವುದೇ ಕಾನೂನು ಅಡೆತಡೆಗಳು ಎದುರಾಗಿಲ್ಲ. ಕರ್ನಾಟಕದಲ್ಲಿ ಸ್ಥಾಪನೆ ಮಾಡಿರುವ ಕಂಪೆನಿ, ಕೈಗಾರಿಕೆಗಳು ಸರ್ಕಾರದಿಂದ ಯಾವುದೇ ರೀತಿಯ ರಿಯಾಯಿತಿ ಪಡೆಯುತ್ತಿದ್ದರೆ ಅಲ್ಲಿ ಕನ್ನಡಿಗರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಮೀಸಲಾತಿ ನೀಡಬೇಕಾಗಿದೆ , ಅದಕ್ಕೆ ಸರ್ಕಾರ ಕಾನೂನಾತ್ಮಕವಾಗಿ ಬಲ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಜಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

      ಸರ್ಕಾರದಿಂದ ಪ್ರೋತ್ಸಾಹ ಧನ, ತೆರಿಗೆ, ವಿದ್ಯುತ್ ದರ ರಿಯಾಯಿತಿ ಪಡೆಯುವ ಕಂಪನಿಗಳಲ್ಲಿ ಹುದ್ದೆಗಳು ಲಭ್ಯವಿದ್ದಲ್ಲಿ ಕನ್ನಡಿಗರಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಸಿ ಮತ್ತು ಡಿ ದರ್ಜೆ ಕೆಲಸ ಕೊಡಬೇಕಿದೆ. ವಿಕಲಚೇತನರಿಗೆ ಶೇಕಡಾ 5 ರಷ್ಟು ಮೀಸಲಾತಿ ಕಲ್ಪಿಸಲಾಗುವುದು. ಕರ್ನಾಟಕ ಔದ್ಯೋಗಿಕ ಕೈಗಾರಿಕೆ ಉದ್ಯೋಗಗಳ ನಿಯಮಾವಳಿಗಳು ಅನುಮೋದನೆ ನೀಡಲಾಗಿದೆ.

       ಪೂರ್ಣ ಪ್ರಮಾಣದ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂಬ ಪ್ರಯತ್ನಕ್ಕೆ ಪೂರ್ಣ ಸಮ್ಮತಿ ಸಿಗದ ಹಿನ್ನೆಲೆಯಲ್ಲಿ ಆದ್ಯತೆ ಮೇಲೆ ಉದ್ಯೋಗ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಸರ್ಕಾರದ ಈ ನಿಯಮಗಳಿಂದ ಐಟಿ/ಬಿಟಿ ಮತ್ತು ಇತರ ತಾಂತ್ರಿಕ ವಲಯದ ಸಂಸ್ಥೆಗಳಿಗೆ ವಿನಾಯ್ತಿ ಇದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap