ಬೆಂಗಳೂರು :
ರಾಜ್ಯದ ಗ್ರಾಮಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 22 ಮತ್ತು 27 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ 2 ಹಂತಗಳಲ್ಲಿ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದೆ.
ರಾಜ್ಯದ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಘೋಷಣೆ ಮಾಡಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ.
ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕೋವಿಡ್-19 ನಿಯಮ ಕಡ್ಡಾಯ ಮಾಡಲಾಗಿದ್ದು, ಕೆಲವು ಕಡೆ ಮತದಾನಕ್ಕೆ ಇವಿಎಂ ಬಳಸಲು ನಿರ್ಧರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ