ಗ್ರೆನೇಡ್ ಸ್ಫೋಟದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರಲ್ಲಿ ಓರ್ವ ವ್ಯಕ್ತಿ ಚಿಕಿತ್ಸೆ ಯಾಗದೆ ಮೃತರಾಗಿದ್ದಾರೆ
ಎಂದು ಪೊಲೀಸರು ತಿಳಿಸಿದ್ದಾರೆ.
ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಹತ್ತು ಮಂದಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿದ್ದು, ಘಟನಾ ಸ್ಥಳವನ್ನು ಸಂಪೂರ್ಣ ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಗಾಯಗೊಂಡಿವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಸ್ಫೋಟ ಜಮ್ಮುವಿನ ಹೃದಯ ಭಾಗದಲ್ಲಿ ನಡೆದಿದೆ. ಜನನಿಬಿಡ ಪ್ರದೇಶವನ್ನು ಆಯ್ಕೆ ಮಾಡಿ ಸ್ಫೋಟ ನಡೆಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ