ಚಿಕ್ಕಮಗಳೂರು:
ದಂಗೆ ಎಂದರೆ ಪ್ರತಿಭಟನೆ ಎಂದು ಅರ್ಥ. ಜನರು ಪ್ರತಿಭಟನೆ ಮಾಡಬೇಕು ಎಂದು ನಾನು ಹೇಳಿದ್ದೇನೆ. ಆದರೆ ಈ ಹೇಳಿಕೆ ‘ಬಿ.ಎಸ್.ಯಡಿಯೂರಪ್ಪ ಅವರು ಹಲವಾರು ಬಾರಿ ಬೆಂಕಿ ಹಚ್ಚುವ ಮಾತುಗಳನ್ನಾಡಿದ್ದಾರೆ. ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಶೃಂಗೇರಿ ಶಾರದಾಂಬೆಯ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ವಿರುದ್ಧ ದಂಗೆಗೆ ಕರೆ ಕೊಟ್ಟಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಬಿಜೆಪಿಯು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಬಿಜೆಪಿಯವರು ರಾಜ್ಯಪಾಲರಿಗೆ ದೂರು ಕೊಟ್ಟಿದ್ದರೆ ಸಂತೋಷ. ರಾಜ್ಯಪಾಲರು ಕೇಳಿದರೆ ವಿವರಣೆ ನೀಡುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
ಹಾಸನ ಶಾಸಕಾಂಗ ಸಭೆಗೆ ಯಾವುದೇ ವಿಶೇಷತೆ ಇಲ್ಲ. ಸಭೆಗೆ ಎಲ್ಲ ಶಾಸಕರಿಗೂ ಆಹ್ವಾನ ನೀಡಲಾಗಿದೆ. ಮುಂಬೈಗೆ ಹೋಗಿದ್ದಾರೆ ಎನ್ನಲಾಗುತ್ತಿರುವ ಶಾಸಕರೂ ಭಾಗಿಯಾಗಲಿದ್ದಾರೆ. ನಾಳೆ ಸಂಜೆ ಹಾಸನದಲ್ಲಿ ವಾಸ್ತವ್ಯ ಹೂಡುತ್ತೇನೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ